Kannada NewsKarnataka NewsLatest

ಬೆಳಗಾವಿ ಜಿಲ್ಲೆ ಹಾಗೂ ತಾಲೂಕುಗಳ ಕನ್ನಡ ಸಾಹಿತ್ಯ ಸಮ್ಮೇಳನಗಳ ದಿನಾಂಕ ಪ್ರಕಟ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 15 ನೇ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 21 ಮತ್ತು 22 ರಂದು ಚಿಕ್ಕೋಡಿಯಲ್ಲಿ ಜರುಗಲಿದೆ.

ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಜಿಲ್ಲಾ ಘಟಕ ಜಿಲ್ಲೆ ಹಾಗೂ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಗಳ ದಿನಾಂಕಗಳನ್ನು ನಿಗದಿಪಡಿಸಿ ಈ ಕುರಿತ ಪಟ್ಟಿ ಬಿಡುಗಡೆಗೊಳಿಸಿದೆ.

Home add -Advt

ನ.29 ರಂದು ಚುಂಚುನೂರು ಗ್ರಾಮದಲ್ಲಿ ರಾಮದುರ್ಗ ತಾಲೂಕು  ಕನ್ನಡ ಸಾಹಿತ್ಯ ಸಮ್ಮೇಳನ, ನ.30 ರಂದು ಸತ್ತಿಗೇರಿ ಗ್ರಾಮದ ಸರಕಾರಿ ಪ್ರೌಢಶಾಲೆ ಮೈದಾನದಲ್ಲಿ ಯರಗಟ್ಟಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ, ಡಿ.11 ರಂದು ನಿಪ್ಪಾಣಿಯಲ್ಲಿ ನಿಪ್ಪಾಣಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ, ಡಿ.12 ರಂದು ಅರಳಿಕಟ್ಟಿ ಗ್ರಾಮದಲ್ಲಿ ಬೆಳಗಾವಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ, ಡಿ. 17 ರಂದು ಬೆಟಗೇರಿ ಗ್ರಾಮದಲ್ಲಿ ಗೋಕಾಕ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ, ಡಿ. 25 ರಂದು ಕಿತ್ತೂರು ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ, ಡಿ. 31 ರಂದು ಖಾನಾಪುರ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನ, ಜ.15 ರಂದು ಶಿರಗುಪ್ಪಿ ಗ್ರಾಮದಲ್ಲಿ ಕಾಗವಾಡ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿವೆ.

ಜಿಲ್ಲೆಯ ಸಮಸ್ತ ಕನ್ನಡಾಭಿಮಾನಿಗಳು ಎಲ್ಲಾ ಸಮ್ಮೇಳನಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಮಂಗಲಾ ಮೆಟಗುಡ್ಡ ಪ್ರಕಟಣೆಯಲ್ಲಿ ಕೋರಿದ್ದಾರೆ.

2 ಕೋಟಿ ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ

Related Articles

Back to top button