Kannada NewsKarnataka NewsLatest

*ಆಪರೇಷನ್ ಹಸ್ತಕ್ಕೆ ಬಿಜೆಪಿಯ ಇನ್ನಿಬ್ಬರು ಶಾಸಕರು…? ಕಿಚ್ಚನ ಹುಟ್ಟುಹಬ್ಬದಲ್ಲಿ ಭಾಗಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ ನಾಯಕರು, ಕುತೂಹಲ ಮೂಡಿಸಿದ ಚರ್ಚೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ‘ಆಪರೇಷನ್ ಹಸ್ತ’ ಚರ್ಚೆ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ನಡುವೆಯೇ ನಟ ಕಿಚ್ಚ ಸುದೀಪ್ ಬರ್ತ್ ಡೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಬಿಜೆಪಿಯ ಇನ್ನಿಬ್ಬರು ಶಾಸಕರು ಮಹತ್ವದ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

Home add -Advt

ನಟ ಕಿಚ್ಚ ಸುದೀಪ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಇದರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿಯ ಹಲವು ನಾಯಕರು ಭಾಗವಹಿಸಿದ್ದರು. ಕಿಚ್ಚನ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಶಾಸಕರಾದ ಬಿ.ಸಿ.ಪಾಟೀಲ್, ರಾಜು ಗೌಡ, ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಆತ್ಮೀಯವಾಗಿ ಚರ್ಚಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಆಪರೇಷನ್ ಹಸ್ತಕ್ಕೆ ಬಿಜೆಪಿಯ ಇನ್ನಿಬ್ಬರು ಶಾಸಕರು ಒಳಗಾಗಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ಬಿಜೆಪಿಯ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದ ಬೆನ್ನಲ್ಲೇ ಇದೀಗ ಕಿಚ್ಚನ ಬರ್ತ್ ಡೇ ಪಾರ್ಟಿಯಲ್ಲಿ ರಾಜ್ಯ ರಾಜಕೀಯ ನಾಯಕರು ಪಾಲ್ಗೊಂಡಿದ್ದು, ಈ ವೇಳೆ ಬಿ.ಸಿ.ಪಾಟೀಲ್ ಹಾಗೂ ರಾಜು ಗೌಡ ಡಿಸಿಎಂ ಜೊತೆ ವಿಶೇಷವಾಗಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

Related Articles

Back to top button