Kannada NewsKarnataka NewsLatestPolitics
*ಶಾಸಕ ಯತ್ನಾಳ್ ಆಸ್ಪತ್ರೆಯಿಂದ ಡಿಸ್ಚಾರ್ಜ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಪ್ರತಿಭಟನೆ ವೇಳೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಶಸಕ ಬಸನಗೌಡ ಪಾಟೀಲ್ ಯತ್ನಾಳ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಯತ್ನಾಳ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿನ ಫೋರ್ಟೀಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶಾಸಕ ಯತ್ನಾಳ್, ಕುಟುಂಬದವರ ಜೊತೆ ವಿಜಯಪುರಕ್ಕೆ ತೆರಳಿದ್ದಾರೆ.
ವಿಧಾನಸಭೆಯಿಂದ ಬಿಜೆಪಿ ಹತ್ತು ಶಾಸಕರನ್ನು ಸ್ಪೀಕರ್ ಅಮಾನತುಗೊಳಿಸಿರುವುದನ್ನು ಖಂಡಿಸಿ ವಿಧಾನಸೌಧ ಸ್ಪೀಕರ್ ಕಚೇರಿ ಮುಂಭಾಗ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಶಾಸಕ ಯತ್ನಾಳ್ ಬಿಪಿ ಸಮಸ್ಯೆಯಿಂದ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಈಗ ಚೇತರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಯತ್ನಾಳ್ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.




