Karnataka News

*ಸಿಡಿಲು ಬಡಿದು ಇಬ್ಬರು ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರತ್ಯೇಕ ಘಟನೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ.

Home add -Advt

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದಲ್ಲಿ ನಬಿಲಾಲ್ ಚೌಧರಿ (70) ಎಂಬುವವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಈ ದುರಂತ ಸಂಭವಿಸಿದೆ. ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದಲ್ಲಿ ಸಿಡಿಲಿಗೆ ಯುವಕನೊಬ್ಬ ಬಲಿಯಾಗಿದ್ದಾರೆ.

20 ವರ್ಷದ ಮೈಲಾರಪ್ಪ ಉಣಕಲ್ ಮೃತ ಯುವಕ. ಜಾನುವಾರುಗಳ ಮೈ ತೊಳೆಯಲೆಂದು ಹೋಗಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಕುಂದಗೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button