Kannada NewsKarnataka News

*ಟೈ‌ರ್ ಬ್ಲಾಸ್ಟ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಇನ್ನೋವಾ ಕಾರ್: ಮೂವರ ಸಾವು*

ಪ್ರಗತಿವಾಹಿನಿ ಸುದ್ದಿ: ಇನ್ನೋವಾ ಕಾರಿನ ಟೈ‌ರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಇಂದು ಬೆಳ್ಳಂ ಬೆಳಗ್ಗೆ ಬೆಳಗ್ಗೆ ಚಿತ್ರದುರ್ಗ ಹೊರವಲಯದ ಸೀಬಾರ ಸಮೀಪದ ಗೋಶಾಲೆ ಬಳಿ ನಡೆದಿದೆ. ಘಟನೆಯಲ್ಲಿ ಪೊಲೀಸ್‌ ಕಾನ್ಸ್‌ಟೇಬಲ್‌ ಅರ್ಜುನ್ (28) ಹಾಗೂ ಸರವಣ್ (30), ಶ್ರೀಧ‌ರ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. 

Home add -Advt

ಮೃತರನ್ನ ತಮಿಳುನಾಡಿನ ಕೃಷ್ಣಗಿರಿ ಮೂಲದವರು ಎಂದು ತಿಳಿದು ಬಂದಿದೆ. ಇನ್ನೋವಾ ಕಾರಿನಲ್ಲಿ 9 ಮಂದಿ ಸ್ನೇಹಿತರು ಗೋವಾ ಪ್ರವಾಸಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಈ ಅಪಘಾತ ಸಂಭವಿಸಿದೆ. 6 ಮಂದಿ ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರ ಎನ್ನಲಾಗಿದ್ದು, ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. 

ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ಸಿಪಿಐ ಮುದ್ದುರಾಜ್‌ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button