Karnataka News
*ಬುಲೆರೊ ಹಾಗೂ ಸಾರಿಗೆ ಬಸ್ ನಡುವೆ ಭೀಕರ ಅಪಘಾತ: ಒಂದೆ ಕುಟುಂಬದ ನಾಲ್ವರ ಸಾವು*

ಪ್ರಗತಿವಾಹಿನಿ ಸುದ್ದಿ: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮದ್ದರಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಲೆರೊ ಹಾಗೂ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಕಳೆದ ರಾತ್ರಿ ನಡೆದಿದೆ.
ಮೃತರನ್ನು ವರ್ಕನಹಳ್ಳಿ ಗ್ರಾಮದ ಚಾಲಕ ಶರಣಪ್ಪ (30), ಸುನೀತಾ (19), ಸೋಮವ್ವ (50) ಮತ್ತು ತಂಗಮ್ಮ (55) ಎಂದು ಗುರುತಿಸಲಾಗಿದೆ. ಇನ್ನೂ ಹಲವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಕಲಬುರಗಿಯ ಘತ್ತರಗಿ ಭಾಗ್ಯವಂತಿ ದೇವರ ಕಾರ್ಯಕ್ಕೆ ಹೋಗುತ್ತಿದ್ದರು.
ಯಾದಗಿರಿ ತಾಲೂಕಿನ ಭೀಮರಾಯನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಎಸ್ಪಿ ಪೃಥ್ವಿಕ್ ಶಂಕರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.



