Belagavi NewsBelgaum NewsKannada NewsKarnataka NewsPolitics

*ಮಾನವ ಕುಲ ತಲೆ ತಗ್ಗಿಸುವ ಕೃತ್ಯವಿದು; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತ ಮಹಿಳೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಸಂತ್ರಸ್ತ ಮಹಿಳೆ ಬೆಳಗಾವಿ ಭಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳೆಗೆ ಧೈರ್ಯ ತುಂಬಿದರು.

Home add -Advt

ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಇಡೀ ಮಾನವ ಕುಲ ತಲೆತಗ್ಗಿಸುವ ಘಟನೆ ಇದು. ನನ್ನ ತಾಲೂಕಿನಲ್ಲಿ ಇಂತಹ ಘಟನೆ ನಡೆದಿರುವು ದು ನಿಜಕ್ಕೂ ಖೇದಕರ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.


Related Articles

Back to top button