LatestUncategorized

*ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ ಸುರ್ಜೇವಾಲ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮತದಾನೋತ್ತರ ಸಮೀಕ್ಷೆ ಪ್ರಕಟವಾದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

Home add -Advt

ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸುರ್ಜೇವಾಲ, ಸುಮಾರು ಎರಡು ಗಂಟೆಗಳ ಕಾಲ ಮಹತ್ವದ ಚರ್ಚೆ ನಡೆಸಿದ್ದಾರೆ. ಮತದಾನೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆ ಬಲ ಎಂಬ ವರದಿ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ. ಅಲ್ಲದೇ ಒಂದು ವೇಳೆ ಅತಂತ್ರ ಫಲಿತಾಂಶ ಬಂದರೆ ಮುಂದಿನ ರಾಜಕೀಯ ರಣತಂತ್ರದ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎದು ತಿಳಿದಿಬಂದಿದೆ.

ಸಿದ್ದರಾಮಯ್ಯ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಣದೀಪ್ ಸುರ್ಜೇವಾಲಾ, ಕರ್ನಾಟಕದ ಜನತೆಗೆ ಧನ್ಯವದಗಳು. ಬದಲಾವಣೆಗಾಗಿ ಮತಚಲಾಯಿಸಿದ್ದಕ್ಕೆ ಧನ್ಯವಾದ. ಮೇ 13 ರಂದು ಕಾಂಗ್ರೆಸ್ ಸರ್ಕಾರ ರಚನೆ ಆಗುತ್ತದೆ. ಕರ್ನಾಟಕವನ್ನು ಮತ್ತೆ ರಿ ಬ್ರ್ಯಾಂಡ್ ಮಾಡಲಿದ್ದೇವೆ ಎಂದು ಹೇಳಿದರು.

https://pragati.taskdun.com/shobha-karandlajereactionexit-poll/


Related Articles

Back to top button