Latest

ಭಾರತೀಯ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ನೂತನ‌ ಶಿಕ್ಷಣ ನೀತಿ ಜಾರಿ: ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಭಾರತೀಯ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ನೂತನ‌ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಳಗಾವಿ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

Home add -Advt

ನೂತನ ಶಿಕ್ಷಣ ನೀತಿ ಕುರಿತು ಶಿಕ್ಷಣ ತಜ್ಞರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ವಲಯದ ಮೂರು ವರ್ಷಗಳ ಕಾಲ ಚರ್ಚಿಸಿ‌ ಸಮಗ್ರವಾಗಿ ರೂಪಿಸಲಾಗಿದೆ. 21ನೇ ಶತಮಾನಕ್ಕೆ ತಕ್ಕಂತೆ, ದೇಶದ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಅಂತರಾಷ್ಟ್ರೀಯ ಮಟ್ಟದ ಪೈಪೋಟಿಗೆ ಸಿದ್ದಪಡಿಸುವುದು, ಕೌಶಲ್ಯವನ್ನು ಹೆಚ್ಚಿಸವುದು ಶಿಕ್ಷಣ ನೀತಿಯ ಉದ್ದೇಶವಾಗಿದೆ. ಪ್ರಾಥಮಿಕ ಹಾಗೂ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರುವ ಪ್ರಯತ್ನವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವನ್ನು ಕೈಗೊಂಡಿದ್ದಾರೆ. ಭಾರತೀಯರಿಂದ ಭಾರತೀಯ ಮಕ್ಕಳಿಗಾಗಿ ರೂಪಿಸಿರುವ ಶಿಕ್ಷಣ ವ್ಯವಸ್ಥೆ ಇದಾಗಿದೆ ಎಂದರು.

ಸೆ.27ರಂದು ಕರೆ ನೀಡಿರುವ ಭಾರತ್ ಬಂದ್ ವಿಚಾರವಾಗಿ ಮಾತನಾಡಿದ ಸಿಎಂ, ಕೋವಿಡ್ ಲಾಕ್ ಡೌನ್ ತೆರವಿನ ನಂತರ, ಜನ ಜೀವನ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ.‌ ವ್ಯಾಪಾರ ವಹಿವಾಟುಗಳು ಸಹಜವಾಗಿ ನಡೆಯುತ್ತಿವೆ. ಈ ಸಂದರ್ಭದಲ್ಲಿ ಬಂದ್ ಗೆ ಕರೆ ನೀಡುವುದು ಸರಿಯಲ್ಲ ಎಂದರು.

ಇನ್ನು ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಕುರಿತು ಸದನದಲ್ಲಿ ಉತ್ತರಿಸಿದ್ದೇನೆ. ಅವರ ಜತೆ ನಿರಂತರ ಸಂಪರ್ಕದಲ್ಲಿ ಇದ್ದೇನೆ ಎಂದು ಹೆಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಬೃಹತ್ ಮಧ್ಯಮ ಕೈಗಾರಿಕೆ ಸಚಿವ ಮುರಗೇಶ್ ನಿರಾಣಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಪೊಲೀಸ್ ಆಯುಕ್ತ ಲಾಭುರಾಮ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಬೆಳಗಾವಿ ಜಿಪಂನಲ್ಲಿ ಬಿಜೆಪಿ ಬಾವುಟ : ಜಿಪಂ ಚುನಾವಣೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ರಣಕಹಳೆ

Related Articles

Back to top button