Kannada NewsKarnataka NewsLatest

*ರಾಜ್ಯದ ಹಲವೆಡೆ ಮೈಕೊರೆಯುವ ಚಳಿ; ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಕಡೆಗಳಲ್ಲಿ ಮೈಕೊರೆಯುವ ಚಳಿ ಆರಂಭವಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಹಲವೆಡೆ ಚಳಿ ಮುಂದುವರೆದಿದೆ.

ಈ ಮಧ್ಯೆ ಕೆ ಲ ಜಿಲ್ಲೆಗಳಲ್ಲಿ ಡಿಸೆಂಬರ್ 17ರಿಂದ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Home add -Advt

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬೆಂಗಳೂರು ಗ್ರಾಮಾಂತರ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ನಗರ, ರಾಮನಗರ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುಅವ್ರೆಯಲಿದೆ. ವಿಜಯಪುರದಲ್ಲಿ 11.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣವಿದ್ದು, ಆಗಾಗ ಬಿಸಿಲು ಬೀಳುತ್ತಿದೆ.

Related Articles

Back to top button