Kannada NewsLatest
ಕಲ್ಪವೃಕ್ಷ ಮಹಿಳಾ ಸಂಘಟನೆ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರ

ಬೆಳಗಾವಿ: ಪ್ರಗತಿವಾಹಿನಿ ಸುದ್ದಿ; ಬೆಳಗಾವಿಯ ಬಾಂಧೂರ ಗಲ್ಲಿಯ ಮರಗಾಯಿ ಮಂದಿರದಲ್ಲಿ ಕಲ್ಪವೃಕ್ಷ ಮಹಿಳಾ ಸಂಘಟನೆ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ನೇತ್ರ ತಪಾಸಣೆ ಶಿಬಿರ ನಡೆಸಲಾಯಿತು.
ನಂದಾದೀಪ ಕಣ್ಣಿನ ಆಸ್ಪತ್ರೆ, ವಿಮಲ್ ಫೌಂಡೇಶನ್, ಆಶೀರ್ವಾದ್ ಜ್ಯುವೆಲರ್ಸ್ ಸಹಯೋಗದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ವಿಮಲ್ ಫೌಂಡೇಶನ್ ಅಧ್ಯಕ್ಷರಾದ ಕಿರಣ್ ಜಾಧವ್ ಉದ್ಘಾಟಿಸಿದರು.
ಕಲ್ಪವೃಕ್ಷ ಮಹಿಳಾ ಸಂಘಟನೆಯ ಅಧ್ಯಕ್ಷೆ ಜ್ಯೋತಿ ಡಿ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. 200 ಮಂದಿ ಶಿಬಿರದ ಪ್ರಯೋಜನ ಪಡೆದರು.



