Latest

*ಸಿ.ಟಿ.ರವಿ ಕೃತ್ಯಕ್ಕೆ ಮಾತಿನಲ್ಲೇ ಚಾಟಿ ಬೀಸಿದ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿರವಿ, ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋದ ವಿಚಾರ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದು, ಕೇಸರಿ ಪಾಳಯದ ವಿರುದ್ಧ ಕೈ ಪಡೆ ಕೆಂಡ ಕಾರಿದೆ.

ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ “ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ’’ ಎಂಬ ಸಿ.ಟಿ.ರವಿ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಸುಳ್ಳು ಸುದ್ದಿಯನ್ನೇ ಪ್ರಚಾರ ಮಾಡಿ ನನ್ನನ್ನು ಹಿಂದೂ ವಿರೋಧಿ ಎಂದು ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಆ ರೀತಿ ಅಪಪ್ರಚಾರ ಮಾಡಿದವರೆಲ್ಲರೂ ಈಗ ಸಿ.ಟಿ.ರವಿ ಅವರ ಕೃತ್ಯದಿಂದಾಗಿ ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ ಎಂದು ಟೀಕಿಸಿದ್ದಾರೆ.

ನಾನು ಮೀನು ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂಬ ಬಿಜೆಪಿ ನಾಯಕರ ಸುಳ್ಳು ಸುದ್ದಿಯನ್ನು ನಂಬಿ ನನ್ನನ್ನು ಟೀಕಿಸಿದ್ದ ರಾಜ್ಯದ ಕೆಲವು ಮಠಾಧೀಶರು, ಸಿ.ಟಿ.ರವಿ ಅವರು ಮಾಂಸತಿಂದು ದೇವಸ್ಥಾನಕ್ಕೆ ಹೋಗಿರುವ ಬಗ್ಗೆ ಮೌನವಾಗಿರುವುದು ನನಗೆ ಅಚ್ಚರಿ ಉಂಟುಮಾಡಿದೆ ಎಂದು ಮಠಾಧೀಶರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Home add -Advt

ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ವೈಯಕ್ತಿಕ ಆಯ್ಕೆಗಳು. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು ಎಂದಿರುವ ಸಿದ್ದರಾಮಯ್ಯ, ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ ಬಿಜೆಪಿಯ ಸಿ.ಟಿ ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಸರಣಿ ಟ್ವೀಟ್ ಮೂಲಕ ಚಾಟಿ ಬೀಸಿದ್ದಾರೆ.

*ಇದನ್ನೇ ಬೇರೆಯವರು ಮಾಡಿದ್ರೆ ಹಿಂದು ವಿರೋಧಿ ಅಂತಾರೆ; ಅವರಿಗೊಂದು ನ್ಯಾಯ, ಇವರಿಗೊಂದು ನ್ಯಾಯಾನಾ?*

https://pragati.taskdun.com/priyank-khargec-t-ravinon-vegtemple-visitattack/

Related Articles

Back to top button