Latest

ಕೇಂದ್ರ ರೈಲ್ವೆ ಸಚಿವರ ಜೊತೆ ಸಿಎಂ ಚರ್ಚೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಕೇಂದ್ರ ಕಲ್ಲಿದ್ದಲು ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ ರಾಜ್ಯದ ಕಲ್ಲಿದ್ದಲು ಪೂರೈಕೆ ಹಾಗೂ ಉಪನಗರ ರೈಲು ಯೋಜನೆ ಕುರಿತು ಚರ್ಚಿಸಿದರು.

ಸಭೆಯಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಶಾಸಕರಾದ ಅರವಿಂದ ಲಿಂಬಾವಳಿ, ಲೇಹರ್ ಸಿಂಗ್ ಸಿರೋಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಕೇಂದ್ರ ಹಾಗೂ ರಾಜ್ಯದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button