Belagavi NewsBelgaum NewsKannada NewsKarnataka News

*ಬೆಳಗಾವಿಯ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಚೇರಿ ಸೇರಿ ಎಂಟು ಕಡೆ ಲೋಕಾಯುಕ್ತ ದಾಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ 600 ಮನೆಗಳ ನಿರ್ಮಾಣ ಕಾಮಗಾರಿಯಲ್ಲಿ ಬೋಗಸ್ ದಾಖಲೆ ಸೃಷ್ಟಿಸಿ ಕೋಟ್ಯಂತರ ರೂಪಾಯಿ ಹಣ ದುರ್ಬಳಕೆ ಮಾಡಿರುವ ಆರೋಪ ಇರುವ ಹಿನ್ನೆಲೆಯಲ್ಲಿ ಬೆಳಗಾವಿಯ ಕುವೆಂಪು ನಗರದ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಚೇರಿ ಸೇರಿ ಎಂಟು ಕಡೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.

ಬೆಳಗಾವಿ ಲೋಕಾಯುಕ್ತ ಪೊಲೀಸ ಠಾಣೆಯಲ್ಲಿ ದಾಖಲಾಗಿದ್ದ ಸರ್ಕಾರದ ಹಣ ದುರುಪಯೋಗ ಪ್ರಕರಣದಡಿ ತನಿಖೆ ನಡೆಸಿ ಲೋಕಾಯುಕ್ತ ಎಸ್ಪಿ ಪ್ರಶನ್ ದೇಸಾಯಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. 

Home add -Advt

ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿ, ರಾಮದುರ್ಗ ಪಟ್ಟಣ, ಕೇರೂರ,ಮುದೋಳ, ವಿಜಯಪುರ, ಬೆಂಗಳೂರಿನಲ್ಲಿರುವ ಅಧಿಕಾರಿಗಳು, ಕಚೇರಿ, ಇಂಜಿನಿಯರ್ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಯಡಿ ಮನೆಗಳನ್ನು ನಿರ್ಮಿಸಲಾಗಿದೆ ಎಂದು ದಾಖಲೆಗಳಲ್ಲಿ ತೋರಿಸಿ ಅನುದಾನ ಬಿಡುಗಡೆ ಮಾಡಿಸಿಕೊಂಡಿದ್ದರೂ, ವಾಸ್ತವದಲ್ಲಿ ಹಲವು ಮನೆಗಳನ್ನು ಫಲಾನುಭವಿಗಳೇ ಸ್ವಂತವಾಗಿ ನಿರ್ಮಿಸಿಕೊಂಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಈ ಮೂಲಕ ಕೋಟ್ಯಂತರ ರೂಪಾಯಿ ವಂಚನೆ ನಡೆದಿರುವ ಶಂಕೆ ವ್ಯಕ್ತವಾಗಿದೆ. 

ದಾಳಿಯ ವೇಳೆ ಮಹತ್ವದ ದಾಖಲೆಗಳು, ಹಣಕಾಸು ವ್ಯವಹಾರಗಳ ಮಾಹಿತಿ ಹಾಗೂ ಕಾಮಗಾರಿ ಸಂಬಂಧಿತ ಕಡತಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ. 

Related Articles

Back to top button