Karnataka News

*ಪಾರ್ಟಿ ವೇಳೆ ಯುವಕನ ಮೇಲೆ ಗುಂಡಿನ ದಾಳಿ*

ಪ್ರಗತಿವಾಹಿನಿ ಸುದ್ದಿ: ಎಣ್ಣೆ ಪಾರ್ಟಿ ಮಾಡುತ್ತಿದ್ದ ಯುವಕನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗುಂಚಿ ಗ್ರಾಮದಲ್ಲಿ ನಡೆದಿದೆ.

ಪಾರ್ಟಿ ವೇಳೆ ಜಗಳ ಶುರುವಾಗಿ ಯುವಕನ ಮೇಲೆ ಇಬ್ಬರು ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿನಿಂದಾಗಿ ಶ್ರೀಕಾಂತ್ ಪೂಜಾರಿ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ,

Home add -Advt

ಶ್ರೀಕಾಂತ್ ಪೂಜಾರಿಯ ಎಡಗೈಗೆ ಗುಂಡೇಟು ತಗುಲಿದೆ. ಪ್ರಕರಣ ಸಂಬಂಧ ಗನ್ ಸಮೇತ ಮಾಳಪ್ಪ, ಕಾಂತಪ್ಪ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button