Kannada NewsKarnataka NewsLatest

*ಎರಡು ಬಸ್ ಗಳ ನಡುವೆ ಭೀಕರ ಅಪಘಾತ; ಇಬ್ಬರು ಪ್ರಯಾಣಿಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಎರಡು ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕವಲಗಿ ಬಳಿ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಅಪಘಾತ ಸಂಭವಿಸಿದ್ದು ಎರಡು ಸರ್ಕಾರಿ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿವೆ. ಇಬ್ಬರು ಮಹಿಳಾ ಪ್ರಯಾಣಿಕರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ಸಜೀದಾ ಬೇಗಂ (36), ರೋಹಿಣಿ ಪಂಚಾಳ (31) ಮೃತರು. ಗಾಯಾಳು ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರ ಗ್ರಾಮಾಂತರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿ ಪರಿಶೀಲಿಸಿದ್ದಾರೆ.


Related Articles

Back to top button