Politics

*ಶಾಸಕ ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮಶೇಖರ್ ಗೆ ಬಿಗ್ ಶಾಕ್: BJPಯಿಂದ ಉಚ್ಛಾಟನೆ*

ಪ್ರಗತಿವಾಹಿನಿ ಸುದ್ದಿ: ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಗೆ ಬಿಜೆಪಿ ಬಿಗ್ ಶಾಕ್ ನೀಡಿದೆ. ಇಬ್ಬರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದೆ.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಬಿಜೆಪಿ ಹೈಕಮಾಂಡ್ ಆದೆಶ ಹೊರಡಿಸಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಬೆಂಗಳೂರಿನ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಇಬ್ಬರನ್ನೂ ಉಚ್ಛಾಟನೆ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button