
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಹಲವಾರು ಪ್ರಭಾವಿ ಮುಖಂಡರು ಶುಕ್ರವಾರ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನಿವಾಸದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಹಾಗೂ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಆರ್.ಕೆ. ರಮೇಶ್ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಬೆಂಗಳೂರು ದಕ್ಷಿಣ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಜೆಡಿಎಸ್‌ನ ಭಾಗ್ಯಮ್ಮ ದೇವರಾಜು, ಅಖಿಲ ಕರ್ನಾಟಕ ಎಚ್. ಡಿ. ಕುಮಾರಸ್ವಾಮಿ ಅವರ ಅಭಿಮಾನಿಗಳ ಸಂಘದ ಅಧ್ಯಕ್ಷ ನಾಗಾಭರಣ, ಉತ್ತರಹಳ್ಳಿ ಹೋಬಳಿ ಶ್ರೀ ಮಹರ್ಷಿ ವಾಲ್ಮಿಕಿ ನಾಯಕ ಸೇವಾ ಟ್ರಸ್ಟ್‌ನ ಅಧ್ಯಕ್ಷ ಮುಖಂಡ ಮಂಜುನಾಥ್. ಉತ್ತರಹಳ್ಳಿ ಹೋಬಳಿ ಆರ್ಯ ಈಡಿಗ ಸಮಾಜ ಸೇವಾ ಟ್ರಸ್ಟನ ಕಾರ್ಯದರ್ಶಿ ಕೆ.ವಿ. ಗೋಪಾಲ್, ಬೆಂಗಳೂರು ದಕ್ಷಿಣ ವಿಧಾಸಭಾ ಕ್ಷೇತ್ರದ ಜೆಡಿಎಸ್ ಘಟಕದ ಮಾಜಿ ಅಧ್ಯಕ್ಷರಾಗಿರುವ ಬೆಂಗಳೂರು ದಕ್ಷಿಣ ತಾಲೂಕು ಒಕ್ಕಲಿಗರ ಸಂಘದ ಖಜಾಂಚಿ ದೊಡ್ಡಕಲ್ಲಸಂದ್ರದ ಬಿ. ದೇವರಾಜು, ಬಿಜೆಪಿ ನಾಯಕ ಸುಬ್ರಹ್ಮಣ್ಯಪುರ ಗ್ರಾಪಂ ಮಾಜಿ ಅಧ್ಯಕ್ಷ ಬಾಲಕೃಷ್ಣ, ಉತ್ತರಹಳ್ಳಿ ಹೋಬಳಿ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಬಿ. ಬೈರಪ್ಪ, ಉತ್ತರಹಳ್ಳಿ ಹೋಬಳಿ ಒಕ್ಕಲಿಗರ ಕ್ಷೇಮಾಭಿವೃದ್ದಿ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಈಶ್ವರ್, ಬಿಜೆಪಿ ಹಿರಿಯ ನಾಯಕ ಶ್ರೀನಿವಾಸ, ಜೆಡಿಎಸ್ ಹಿರಿಯ ವಕೀಲ ಶ್ರೀನಾಥ್, ಜೆಡಿಎಸ್‌ನ ಅಪ್ಪಯ್ಯ, ಮಧು, ಗಿರೀಶ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ನಾಳೆ ಡಬಲ್ ಸಂಭ್ರಮವಿದ್ದರೂ ಸಂಭ್ರಮಾಚರಣೆ ಇಲ್ಲ ಎಂದ ಸಿಎಂ