Latest

ಪ್ರಧಾನಿ ಕನಸು ಕಾಣುತ್ತಿರುವ ‘ಹೆಬ್ಬಟ್ಟು’ ಗಿರಾಕಿ; ಅವರ ಬಗ್ಗೆಯೂ ಹೀಗೆ ಮಾತನಾಡುತ್ತೀರಾ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿರುವ ಬಿಜೆಪಿ, ಏಕವಚನದಲ್ಲಿ ಮಾತನಾಡುವ ಮುನ್ನ ಎಚ್ಚರವಿರಲಿ ಎಂದು ವಾರ್ನಿಂಗ್ ನೀಡಿದೆ.

ಸರಣಿ ಟ್ವೀಟ್ ಮೂಲಕ ಕಿಡಿ ಕಾರಿರುವ ಬಿಜೆಪಿ, ಜನರಿಂದ ಎರಡನೇ ಅವಧಿಗೆ ಆಯ್ಕೆಯಾದ ಪ್ರಧಾನಿ ಮೋದಿ ಅವರ ಹುದ್ದೆ ಬಗ್ಗೆಯೂ ಕೀಳು ಮಟ್ಟದಲ್ಲಿ ಮಾತನಾಡಿ ನಿಮ್ಮ ಕೀಳು ಸಂಸ್ಕಾರ ಅನಾವರಣ ಮಾಡಿಕೊಂಡಿದ್ದೀರಿ. ಸರ್ಕಾರಿ ಬಂಗಲೆಯಲ್ಲಿಯೇ ಉಳಿಯಬೇಕು ಎಂಬ ಹಟಕ್ಕೆ ಪ್ರತಿಪಕ್ಷ ಸ್ಥಾನ ಪಟ್ಟು ಹಿಡಿದು ಉಳಿಸಿಕೊಂಡ ನಿಮ್ಮಂತವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಎಂದು ಪ್ರಶ್ನಿಸಿದೆ.

Home add -Advt

ಏಕವಚನದಲ್ಲಿ ಮಾತನಾಡುವುದು, ಮಾತೆತ್ತಿದರೆ ನಾನು ಹಳ್ಳಿಯವನು, ನಾನು ಮಾತನಾಡುವ ಶೈಲಿ ಹೀಗೆ ಎಂದು ಸಮಜಾಯಿಷಿ ನೀಡುವ ಸಿದ್ದರಾಮಯ್ಯನವರೇ ನಿಮಗೆ ಗ್ರಾಮೀಣ ಸಂಸ್ಕೃತಿಯ ಅರಿವೇ ಇಲ್ಲ. ಅನ್ಯರನ್ನು ಪ್ರೀತಿ, ಬಹುವಚನ, ಆದರದಿಂದ ಮಾತನಾಡುವುದು ಗ್ರಾಮೀಣ ಸಂಸ್ಕೃತಿ. ಆದರೆ ನಿಮ್ಮಂಥ ’ಮನೆಮುರುಕರು’ ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಎಂದುಕೊಂಡಿದ್ದಾರೆ ಎಂದು ಚಾಟಿ ಬೀಸಿದೆ.

ಇದೇ ವೇಳೆ ರಾಹುಲ್ ಗಾಂಧಿ ವಿರುದ್ಧವೂ ಪರೋಕ್ಷ ವಾಗ್ದಾಳಿ ನಡೆಸಿರುವ ಬಿಜೆಪಿ, ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದಾರೆಂಬ ಕಾರಣಕ್ಕೆ ತಾನು ಪ್ರಧಾನಿಯಾಗಬೇಕೆಂದು ಓರ್ವ ’ಹೆಬ್ಬಟ್ಟು’ ಗಿರಾಕಿ ಕನಸು ಕಾಣುತ್ತಿದ್ದಾನೆ. ಸಿದ್ದರಾಮಯ್ಯನವರೇ ಆತನ ಯೋಗ್ಯತೆ, ಅರ್ಹತೆ ಏನು? ಎಂದು ವಿಚಾರಿಸಿ. ನಿಮ್ಮ ಶಾಶ್ವತ ಪ್ರಧಾನಿ ಅಭ್ಯರ್ಥಿಯ ಬಗ್ಗೆಯೂ ಹೀಗೇ ಮಾತನಾಡುತ್ತೀರಾ? ಸಿದ್ದರಾಮಯ್ಯನವರೇ ಎಂದು ಕೇಳಿದೆ.

KSRTCಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಬರೋಬ್ಬರಿ 15 ಕೋಟಿ ವಂಚನೆ

Related Articles

Back to top button