National

*ಸಿಡಿಲು ಬಡಿದು CRPF ಅಧಿಕಾರಿ ಸಾವು*

ಪ್ರಗತಿವಾಹಿನಿ ಸುದ್ದಿ: ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಸಿಡಿಲು ಬಡಿದು ಸಿಆರ್ ಪಿಎಫ್ ಅಧಿಕಾರಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

ಇಲ್ಲಿನ ಪಶ್ಚಿಮ ಸಿಂಗ್ ಭೂಮ್ ಜಿಲ್ಲೆಯ ಕೆರಿಬುರು ಅರಣ್ಯ ಪ್ರದೇಶದಲ್ಲಿ ನಕ್ಲಸಲರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮಳೆಯ ನಡುವೆಯೇ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಈ ವೇಳೆ ಸಿಡಿಲು ಬಡಿದು ಅಧಿಕಾರಿ ಬಲಿಯಾಗಿದ್ದಾರೆ.

ಮೃತ ಅಧಿಕಾರಿಯನ್ನು ಮಹಾರಬಮ್ ಪ್ರಬೋ ಸಿಂಗ್ (46) ಎಂದು ಗುರುತಿಸಲಾಗಿದೆ. ಎರಡನೇ ದರ್ಜೆಯ ಕಮಾಂಡರ್ ಆಗಿದ್ದರು. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button