
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಸೋಮವಾರ ನಡೆದ ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕ, ವಾಯವ್ಯ ಪದವೀಧರ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಮತದಾನದ ವಿವರ ಲಭ್ಯವಾಗಿದೆ.
ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆದಿದ್ದು, ಅಂತಿಮವಾಗಿ ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ.80, ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಶೇ.59 ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶೇ.84ರಷ್ಟು ಮತದಾನವಾಗಿದೆ.
ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಒಳಗೊಂಡ ವಾಯವ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಕ್ಕೆ ಮತ್ತು ಹುಬ್ಬಳ್ಳಿ -ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆ ಒಳಗೊಂಡ ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಿತು.
ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಶೇ.70ರಷ್ಟು ಮತದಾನವಾಗಿದೆ.
ಬುಧವಾರ ಮತಗಳ ಎಣಿಕೆ ನಡೆಯಲಿದೆ.
ಬೆಳಗಾವಿಯಲ್ಲಿ ನಾಳೆಯಿಂದ ನಿಷೇಧಾಜ್ಞೆ ಜಾರಿ