Latest

*ಶೋಭಾ ಡೆವಲಪರ್ಸ್ ಕಚೇರಿ ಮೇಲೆ IT ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶೋಭಾ ಡೆವಲಪರ್ಸ್ ಕೇಂದ್ರ ಕಚೇರಿ ಹಾಗೂ ಅದಕ್ಕೆ ಸಂಬಂಧಿಸಿದ ಇತರೆ ಕಚೇರಿಗಳ ಮೇಲೆ ದಾಳಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಬೆಳ್ಳಂದೂರಿನಲ್ಲಿರುವ ಕಚೇರಿ, ವೈಟ್ ಫೀಲ್ಡ್ ರಸ್ತೆಯ ಹೂಡಿ, ಬನ್ನೇರುಘಟ್ಟ ರಸ್ತೆಯ ಅರಕೆರೆ ಬಳಿಯ ಕಚೇರಿಗಳ ಮೇಲೆ ದಾಳಿ ನಡೆದಿದೆ.

ಕರ್ನಾಟಕ, ಕೇರಳ, ಚೆನ್ನೈ ನಲ್ಲಿರುವ ಶೋಭಾ ಡೆವಲಪರ್ಸ್ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Home add -Advt

ಆದಾಯ ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಏಕಕಾಲದಲ್ಲಿ 50 ವಾಹನಗಳಲ್ಲಿ ಬಂದ ಅಧಿಕಾರಿಗಳು ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಕಡತಗಳನ್ನ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Related Articles

Back to top button