Latest

ಉಕ್ರೇನ್ ನಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ KSRTCಯಿಂದ ಉಚಿತ ಬಸ್ ವ್ಯವಸ್ಥೆ

ಪ್ರಗತಿವಾಹಿನಿ ಸುದ್ದಿ;  ಬೆಂಗಳೂರು: ಯುದ್ಧಪೀಡಿತ ಉಕ್ರೇನ್ ನಿಂದ ರಾಜ್ಯಕ್ಕೆ ಸುರಕ್ಷಿತವಾಗಿ ಮರಳಿದ ವಿದ್ಯಾರ್ಥಿಗಳಿಗೆ ತಮ್ಮ ಊರುಗಳಿಗೆ ತೆರಳಲು ಉಚಿತ ಬಸ್ ವ್ಯವಸ್ಥೆ ಮಾಡಲು ಕೆ ಎಸ್ ಆರ್ ಟಿಸಿ ನಿರ್ಧರಿಸಿದೆ.

ಈಗಾಗಲೇ ತಾಯ್ನಾಡಿಗೆ ಹಲವು ವಿದ್ಯಾರ್ಥಿಗಳು ಆಗಮಿಸಿದ್ದು, ಇಂದು ರಾಜ್ಯದ 7 ವಿದ್ಯಾರ್ಥಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ. ನಿನ್ನೆ ರಾತ್ರಿ ಉಕ್ರೇನ್ ನಿಂದ ದೆಹಲಿಗೆ ಬಂದಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ಭವನದಲ್ಲಿ ವಸತಿಗೆ ವ್ಯವಸ್ಥೆ ಮಾಡಲಾಗಿತು. ಇದೀಗ 7 ವಿದ್ಯಾರ್ಥಿಗಳು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಕರ್ನಾಟಕ್ಕೆ ಬಂದಿಳಿದ ರಾಜ್ಯದ ವಿದ್ಯಾರ್ಥಿಗಳ ಪರಿಸ್ಥಿತಿ ಪರಿಗಣಿಸಿ ಅವರವರ ಊರುಗಳಿಗೆ ತಲುಪಲು  ಕೆ ಎಸ್ ಆರ್ ಟಿಸಿ ಬಸ್ ನಲ್ಲಿ ಉಚಿತ ವ್ಯವಸ್ಥೆ ಕಲ್ಪಿಸುವುದಾಗಿ ಕೆ ಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ತಿಳಿಸಿದ್ದಾರೆ.

ಈ ಬಗ್ಗೆ ರಾಜ್ಯ ವಿಮಾನ ನಿಲ್ದಾಣದೊಳಗಿನ ಎಲ್ಲಾ ನೋಡಲ್ ಅಧಿಕಾರಿಗಳು ಹಾಗೂ ರಸ್ತೆ ಸಾರಿಗೆ ಸಂಸ್ಥೆಗೆ ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯ ಸಾಧಿಸಿ ಉಚಿತ ಬಸ್ ಪ್ರಯಾಣಕ್ಕೆ ಅನುವು ಮಾಡಿಕೊಡುವಂತೆ ಸೂಚಿಸಿದ್ದಾರೆ.

Home add -Advt

ಉಕ್ರೇನ್ ನಲ್ಲಿ ಚಿಕ್ಕೋಡಿಯ 7 ವಿದ್ಯಾರ್ಥಿಗಳ ಪರದಾಟ

Related Articles

Back to top button