Kannada NewsLatest

ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಭಾರಿ ಮಳೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಕೊಂಚ ಬಿಡುವು ಪಡೆದುಕೊಂಡಿದ್ದ ಮಳೆರಾಯ ಇಂದಿನಿಂದ ನಾಲ್ಕು ದಿನಗಳ ಕಾಲ ಕರಾವಳಿ, ದಕ್ಷಿಣ ಒಳನಾಡು ಭಾಗದಲ್ಲಿ ಅಬ್ಬರಿಸಲಿದ್ದಾನೆ.

ಇಂದಿನಿಂದ ನೈರುತ್ಯ ಮಾನ್ಸೂನ್ ಆರಂಭವಾಗಲಿದ್ದು, ಜೂನ್ 20ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

Home add -Advt

ದಕ್ಷಿಣ ಒಳನಾಡಿನಲ್ಲಿಯೂ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಬಳ್ಳಾರಿ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ , ಚಾಮರಾಜನಗರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಜೂನ್ 19ರವರೆಗೆ ಹರಳಿ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ PWD ಇಂಜಿನಿಯರ್ ಭೀಮಾ ರಾವ್ ಸೇರಿ 21 ಅಧಿಕಾರಿಗಳ ಮನೆ ಮೇಲೆ ACB ದಾಳಿ

Related Articles

Back to top button