Latest

ಅಮಿತ್ ಶಾ ಭೇಟಿಯಾಗಿಲ್ಲ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ ಎಂದ ಸಿಎಂ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗಾಗಿ ದೆಹಲಿಗೆ ಬಂದಿದ್ದೆ. ಆದರೆ ಬೇರೊಂದು ಕಾರ್ಯಕ್ರಮದಲ್ಲಿ ಅವರು ಇರುವುದರಿಂದ ಭೇಟಿ ಸಾಧ್ಯವಾಗಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಮಿತ್ ಶಾ ಅವರಿಗೆ ಬೇರೆ ಕಾರ್ಯಕ್ರಮಗಳು ಇದ್ದವು. ಹಾಗಾಗಿ ಅವರನ್ನು ನೇರವಾಗಿ ಭೇಟಿಯಾಗಲು ಸಾಧ್ಯವಾಗಿಲ್ಲ, ಆದರೆ ಅವರೊಂದಿಗೆ ದೂರವಾಣಿ ಮೂಲಕ ಸುದೀರ್ಘವಾಗಿ ಮಾತನಾಡಿದ್ದೇನೆ. ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ವಿಚಾರ ಚರ್ಚೆ ಮಾಡಿದ್ದೇನೆ ಎಂದರು.

Home add -Advt

ರಾಜ್ಯ ಉಸ್ತುವಾರಿ ಜತೆ ಮಾತನಾಡಲು ಹೇಳಿದ್ದರು. ಹಾಗಾಗಿ ಅರುಣ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಆದಷ್ಟು ಬೇಗ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಮಾಡಲಾಗುತ್ತದೆ ಎಂದು ಹೇಳಿದರು.

ಇನ್ನು ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಿಎಂ ಇದೇ ವೇಳೆ ಸ್ಪಷ್ಟ ಪಡಿಸಿದರು.

ಈ ಮಧ್ಯೆ ವಿಧಾನ ಪರಿಷತ್ ಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರಿಗೆ ಟಿಕೆಟ್ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ಮರಕ್ಕೆ ಡಿಕ್ಕಿ ಹೊಡೆದ ಕ್ರೂಸರ್; 7 ಜನರು ದುರ್ಮರಣ

Related Articles

Back to top button