Karnataka News

20 ಜಿಲ್ಲೆಗಳ ಜೊತೆ ನಾಳೆ ಸಿಎಂ ಯಡಿಯೂರಪ್ಪ ವಿಡೀಯೋ ಸಂವಾದ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದ 20 ಜಿಲ್ಲೆಗಳ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ವಿಡೀಯೋ ಸಂವಾದ ನಡೆಸಲಿದ್ದಾರೆ.

ಮಧ್ಯಾಹ್ನ 12 ಗಂಟೆಗೆ ಗೃಹ ಕಚೇರಿ ಕೃಷ್ಣಾದಿಂದ ಈ ಸಂವಾದ ನಡೆಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಉಪಮುಖ್ಯಮಂತ್ರಿಗಳು, ಸಂಬಂಧಿಸಿದ ಸಚಿವರು, ಉಸ್ತುವಾರಿ ಕಾರ್ಯದರ್ಶಿಗಳಿ, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ತಾವಿರುವ ಸ್ಥಳದಿಂದಲೇ ಸಂವಾದದಲ್ಲಿ ಪಾಲ್ಗೊಳ್ಳಲು ಸೂಚಿಸಲಾಗಿದೆ.

ರಾಜ್ಯದಲ್ಲಿ ಮುಂಗಾರು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳು ಕುರಿತು ಚರ್ಚಿಸಲು ಈ ಸಭೆ ಆಯೋಜಿಸಲಾಗಿದೆ.

ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಯಾದಗಿರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ, ಧಾರವಾಡ, ಹಾವೇರಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಸಚಿವರು, ಅಧಿಕಾರಿಗಳು ಭಾಗವಹಿಸಲು ಸೂಚಿಸಲಾಗಿದೆ.

Home add -Advt

ಮುಖ್ಯಮಂತ್ರಿಗಳ ಜೊತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಸಮಗ್ರ ವಿವರಕ್ಕೆ ಇಲ್ಲಿ ಕ್ಲಿಕ್ ಮಾಡಿ –  New Doc 2021-06-18 11.59.50

Related Articles

Back to top button