Kannada NewsKarnataka NewsLatest
*BREAKING: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಮಹಿಳೆಯ ಮೇಲೆ ಗ್ಯಾಂಗ್ ರೇಪ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ.
ಬೆಂಗಳೂರು ಉತ್ತರ ತಾಲೂಕಿನ ಗಂಗೊಂಡನಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮಹಿಳೆಯ ಮೇಲೆ ಕಾಮುಕರ ಗ್ಯಾಂಗ್ ಅಟ್ಟಹಾಸ ಮೆರೆದಿದೆ. ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಮನೆಯಲ್ಲಿ ಮಹಿಳೆ ಒಬ್ಬಳೇ ಇರುವುದನ್ನು ಗಮನುಸಿ ಮಧ್ಯಪಾನ ಮಾಡಿ ಮನೆಗೆ ನುಗ್ಗಿದ್ದ ಮೂವರು ಈ ಕೃತ್ಯವೆಸಗಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




