Kannada NewsKarnataka NewsLatest

*ಮತ್ತೆ ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಾದ್ಯಂತ ಕಳೆದ ಎರಡು ಮೂರು ದಿನಗಳಿಂದ ಮಳೆಯ ಆರ್ಭಟ ಕಡಿಮೆಯಾಗಿದೆ. ಹಲವು ಜಿಲ್ಲೆಗಳಲ್ಲಿ ಒಣಹವೆ ಶುವುವಾಗಿದೆ. ಈ ನಡುವೆ ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಸೆಪ್ಟೆಂಬರ್ 11ರಿಂದ ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರಿಸಲಿದೆ. ಬೆಂಗಳೂರು ಸೇರಿದಂತೆ 13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ,ರಾಮನಗರ, ಮಂಡ್ಯ, ಮೈಸೂರು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Related Articles

Back to top button