*ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ಬಿರುಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಕೆಲ ಭಾಗಗಳಲ್ಲಿ ಧಾರಾಕಾರ ಮಳೆಯಾಗಿದ್ದರೆ, ಇನ್ನು ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲ್ಬುರ್ಗಿ, ಗದಗ, ಬೀದರ್ ಜಿಲ್ಲೆಯಲ್ಲಿ ಕೂಡ ಭಾರಿ ಗಾಳಿ, ಗುಡುಗು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆ ತಿಳಿಸಿದಂತೆ, ರಾಜ್ಯದ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಕೆಲ ಭಾಗದಲ್ಲಿ ಗಾಳಿಸಹಿತ ಗುಡುಗು ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಇನ್ನು ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ದಾವಣಗೆರೆ ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉಳಿದಂತೆ ಚಾಮರಾಜನಗರ, ಮಂಡ್ಯ ರಾಮನಗರ, ಮೈಸೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾದ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




