Latest

*ತುಂಗಭದ್ರಾ ಜಲಾಶಯದ ಹೊಸ ಕ್ರೆಸ್ಟ್ ಗೇಟ್ ಅಳವಡಿಕೆ ಕಾರ್ಯ ಆರಂಭ*

ಪ್ರಗತಿವಾಹಿನಿ ಸುದ್ದಿ: ಚೈನ್ ಲಿಂಕ್ ಕಟ್ಟಾಗಿ ಕೆಳಕ್ಕೆ ಬಿದ್ದಿರುವ ತುಂಗಭದ್ರಾ ಜಲಾಶಯದ ಗೇಟ್ ನಂ.19ಕ್ಕೆ ಹೊಸ ಕ್ರೆಸ್ಟ್ ಗೇಟ್ ಅಳವಡಿಕೆ ಕಾರ್ಯ ಇಂದಿನಿಂದ ಆರಂಭವಾಗಿದ್ದು, ಆಗಸ್ಟ್ 17ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಗಳಿವೆ.

ಮಂಗಳವಾರ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗೇಟ್ ನಂಬರ್ 19ರ ಸರಪಳಿ ತುಂಡರಿಸಿ ಕಳಚಿ ಬಿದ್ದಿರುವ ಸ್ಥಳವನ್ನು ವೀಕ್ಷಣೆ ಮಾಡಿದರು. ಬಳಿಕ ನೀರಾವರಿ ಅಧಿಕಾರಿಗಳಿಂದ ಘಟನೆಯ ಬಗ್ಗೆ ವಿವರಣೆ ಪಡೆದರು. ನೀರಾವರಿ ಅಧಿಕಾರಿಗಳ ಜೊತೆ ಸುಮಾರು 15 ನಿಮಿಷಗಳ ಕಾಲ ಜಲಾಶಯದ ಸಂರಕ್ಷಣೆ, ನಿರ್ವಹಣೆ ಕುರಿತು ಚರ್ಚೆ ನಡೆಸಿದರು. ಆಂಧ್ರಪ್ರದೇಶದ ನೀರಾವರಿ ಸಚಿವರು, ಜಲಾಶಯದ ವ್ಯಾಪ್ತಿಯ ರೈತ ಮುಖಂಡರ ಜೊತೆಗೂ ಸಮಾಲೋಚನೆ ನಡೆಸಿದರು. 

Home add -Advt

Related Articles

Back to top button