Latest

*ಸೇತುವೆಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಕಾರು; ಮೂವರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ವೇಗವಾಗಿ ಬಂದ ಕಾರು ಸೇತುವೆಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದೊಡ್ಡಾಲದಮರದ ಬಳಿ ನಡೆದಿದೆ.

ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ಎನ್ ಹೆಚ್ 48ರಲ್ಲಿ ಈ ದುರಂತ ಸಂಭವಿಸಿದೆ. ಕಾರು ಚಿತ್ರದುರ್ಗದ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿಯಾಗಿದೆ. ಬಳಿಕ ಕಾರು ಸೇತುವೆ ಮೇಲಿಂದ ಕೆಳಗೆ ಬಿದ್ದಿದೆ.

Home add -Advt

ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾನೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂದು ಬೆಳಿಗ್ಗೆ ತುಮಕೂರಿನಲ್ಲಿ ಕ್ಯಾಂಟರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ್ದ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದರು. ಈ ಘಟನೆ ಬೆನ್ನಲ್ಲೇ ಇದೀಗ ಜಿಲ್ಲೆಯಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ.

*ಮತ್ತೊಂದು ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು*

https://pragati.taskdun.com/cantercaraccident4-people-deathtumakur/

Related Articles

Back to top button