Latest

ನಾಪತ್ತೆಯಾಗಿದ್ದ ASI ಶವವಾಗಿ ಪತ್ತೆ

ಪ್ರಗತಿವಾಹಿನಿ ಸುದ್ದಿ; ಹಾಸನ: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ಸಂಚಾರಿ ಪೊಲೀಸ್ ಎಎಸ್ಐ ಶವವಾಗಿ ಪತ್ತೆಯಾಗಿರುವ ಘಟನೆ ಹಾಸನದಲ್ಲಿ ಬೆಳಕಿಗೆ ಬಂದಿದೆ.

ಕಾಡ್ಲೂರು ಬಳಿಯ ಕಾವೇರಿ ನದಿಯಲ್ಲಿ ಎಎಸ್ಐ ಸುರೇಶ್ ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾಗಿದ್ದ ಸುರೇಶ್ ಶವವಾಗಿ ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

Home add -Advt

ಕೊಡಗು ಜಿಲ್ಲೆ ಕುಶಾಲನಗರದ ಟ್ರಾಫಿಕ್ ಎ ಎಸ್ ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಸುರೇಶ್, ಇತ್ತೀಚೆಗಷ್ಟೇ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಇದೀಗ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಕೊಣನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Related Articles

Back to top button