Latest

ಉತ್ತರ ಕನ್ನಡ ಜಿಲ್ಲೆಯ ಜನರ ಕನಸು ನನಸು; ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸರ್ಕಾರದ ಸಮ್ಮತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಜನರ ಬಹುವರ್ಷಗಳ ಬೇಡಿಕೆ ಕೊನೆಗೂ ಈಡೇರುವ ಕಾಲ ಸನ್ನಿಹಿತವಾಗಿದೆ. ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂಬ ಕೂಗಿಗೆ ಸರ್ಕಾರ ಕೊನೆಗೂ ಒಪ್ಪಿಗೆ ನೀಡಿದೆ.

ಆರೋಗ್ಯ ಸಚಿವ ಡಾ.ಸುಧಾಕರ್ ನೇತೃತ್ವದಲ್ಲಿ ಇಂದು ಉತ್ತರ ಕನ್ನಡ ಜಿಲ್ಲಾ ಶಾಸಕರ ಸಭೆ ನಡೆದಿದ್ದು, ಸಭೆಯಲ್ಲಿ ಶಾಸಕರ ಒತ್ತಡಕ್ಕೆ ಮಣಿದು ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಸಮ್ಮತಿ ಸೂಚಿಸಿದ್ದಾರೆ.

Home add -Advt

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಸರ್ಕಾರ ಬದ್ಧವಾಗಿದೆ. ಸುಸಜ್ಜಿತವಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವಾಗಲಿದೆ. ಈ ಕುರಿತು ಆರ್ಥಿಕ ಇಲಾಖೆಗೆ ಕಡತ ರವಾನಿಸಲಾಗಿದೆ. ಆಸ್ಪತ್ರೆ ನಿರ್ಮಾಣದ ಸ್ಥಳದ ಬಗ್ಗೆ ಇನ್ನೂ ಸ್ಥಳ ನಿಗದಿಯಾಗಿಲ್ಲ. ಅಧಿವೇಶನದ ಬಳಿಕ ನಾನು ಹಾಗೂ ಸಿಎಂ ಬಸವರಾಜ್ ಬೊಮ್ಮಾಯಿ ಜಿಲ್ಲೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.

PSI ಹುದ್ದೆ ನೇಮಕಾತಿ ಅಕ್ರಮ; ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನಾಪತ್ತೆ

https://pragati.taskdun.com/latest/psi-scamk-r-puram-psiescape/

Related Articles

Back to top button