Karnataka News

*ದಂಪತಿ ಆತ್ಮಹತ್ಯೆಗೆ ಯತ್ನ: ಪತಿ ದುರ್ಮರಣ; ಪತ್ನಿ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಸಾಲಗಾರರ ಕಿರುಕುಳಕ್ಕೆ ನೊಂದು ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಸಾವನ್ನಪ್ಪಿದ್ದು, ಪತ್ನಿ ಸ್ಥಿತಿ ಗಂಭೀರವಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ.

ಇಲ್ಲಿನ ಹೌಸಿಂಗ್ ಬೋರ್ಡ್ ಏರಿಯಾದ ಬಾಡಿಗೆ ಮನೆಯಲ್ಲಿ ಈ ಘಟನೆ ನಡೆದಿದೆ. ಅನೀಲ್ (47) ಮೃತ ವ್ಯಕ್ತಿ. ಪತ್ನಿ ಉಮಾ (45) ಸ್ಥಿತಿ ಗಂಭೀರವಾಗಿದೆ. ಉಮಾ ಅವರನ್ನು ಕುಣಿಗಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಕುಣಿಗಲ್ ನಲ್ಲಿ ಎಲೆಕ್ಟ್ರಾನಿಕ್ ಅಂಗಡಿ ಇಟ್ಟುಕೊಂಡಿದ್ದ ಅನೀಲ್ ಇತ್ತೀಚೆಗೆ ಆನ್ ಲೈನ್ ನಲ್ಲಿ ಹಣ ಹೂಡಿಕೆ ಮಾಡಿ 8-10 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ. ಸಾಲಗಾರರ ಕಿರುಕುಳಕ್ಕೆ ನೊಂದು ದಂಪತಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅನೀಲ್ ಮನೆಯಲ್ಲಿಯೇ ಸಾವನ್ನಪ್ಪಿದ್ದಾರೆ. ಪತ್ನಿ ಸ್ಥಿತಿ ಗಂಭೀರವಾಗಿದೆ. ವಿಷಯ ತಿಳಿಯುತ್ತಿದ್ದಂತೆ ನೆರೆಹೊರೆಯವರು ಉಮಾ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Related Articles

Back to top button