Kannada NewsKarnataka NewsLatestTravel

*ಕ್ರೂಸರ್‌ಗೆ ಗುದ್ದಿದ ಲಾರಿ: ಒಂದೇ ಕುಟುಂಬದ ಐವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕ್ರೂಸರ್, ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಕ್ರಾಸ್ ಬಳಿಯ ಲಾಡ್ಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಅಪಘಾತ ಸಂಭವಿಸಿದ್ದು, ಲಾರಿ  ಡಿಕ್ಕಿ ರಭಸಕ್ಕೆ ಕ್ರೂಸರ್ ನಜ್ಜುಗುಜ್ಜಾಗಿದೆ.

ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಶಾ (48), ಮೈಬೂಬ್ ಅಲಿ (45), ರಸೂಲ್ ಬೀ (42), ಫಾತೀಮಾ ಅಲೀ (38) ಮೃತರು. ಮೃತರೆಲ್ಲರೂ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದವರು. 

ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button