Karnataka News

*ಡಿ.28 ರವರೆಗೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಡಿಸೆಂಬರ್ ಕಳೆಯುತ್ತಾ ಬಂದರೂ ಚಳಿಯ ಪ್ರಮಾಣ ಕಡಿಮೆಯೇ ಇದೆ. ಡಿಸೆಂಬರ್ 28ರವರೆಗೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ,ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ

Home add -Advt

ಧಾರವಾಡ ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 15.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು ಬಿಸಿಲಿರಲಿದ್ದು ಡಿ.26ರ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Related Articles

Back to top button