CrimeFilm & EntertainmentKannada NewsKarnataka NewsLatest

*ಖಾಸಗಿ ಸುದ್ದಿವಾಹಿನಿ ಮುಖ್ಯಸ್ಥನಿಗೆ ಮೂರು ತಿಂಗಳು ಜೈಲು ಶಿಕ್ಷೆ*

ಪ್ರಗತಿವಾಹಿನಿ ಸುದ್ದಿ: ಹಿರಿಯ ಐಪಿಎಸ್ ಅಧಿಕಾರಿ ರವಿಕಾಂತೇಗೌಡ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ಆದೇಶವನ್ನು ಪಾಲಿಸದ ಕಾರಣ ಖಾಸಗಿ ಸುದ್ದಿವಾಹಿನಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.

ಬೆಂಗಳೂರಿನ ಹಿರಿಯ ಐಪಿಎಸ್ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ಅವರು ಹೂಡಿದ್ದ ಸಿವಿಲ್ ಪ್ರಕರಣದಲ್ಲಿ, ನ್ಯಾಯಾಲಯ ನೀಡಿದ್ದ ಆದೇಶವನ್ನು ಪಾಲಿಸದ ಕಾರಣ ರಾಕೇಶ್ ಶೆಟ್ಟಿಗೆ ಬೆಂಗಳೂರು ಗ್ರಾಮಾಂತರ ಸಿವಿಲ್ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

ರವಿಕಾಂತೇಗೌಡ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಅಬ್ದುಲ್ ಸಲೀಂ ಈ ಕುರಿತಂತೆ ಆದೇಶಿಸಿದ್ದಾರೆ.

2023ರ ಸೆಪ್ಟೆಂಬರ್ 8ರಂದು ನ್ಯಾಯಾಲಯ ನೀಡಿದ್ದ ಮಧ್ಯಂತರ ಆದೇಶವನ್ನು ಪ್ರತಿವಾದಿಯಾದ ‘ಪವರ್ ಸ್ಮಾರ್ಟ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ’ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಸಂಜೀವ ಶೆಟ್ಟಿ ಅವರು ಉಲ್ಲಂಘಿಸುವ ಮೂಲಕ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರುವುದು ಸಾಬೀತಾಗಿದೆ ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಆದರೆ ಈ ತೀರ್ಪಿನ ವಿರುದ್ಧ ರಾಕೇಶ್ ಶೆಟ್ಟಿ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆಂದು ಗೊತ್ತಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button