Karnataka NewsPolitics

*ನಿರ್ಮಲಾ ಸೀತಾರಾಮನ್ ವಿರುದ್ಧ FIR ದಾಖಲು*

ವಿಜಯೇಂದ್ರ, ನಳೀನ್ ಕುಮಾರ್ ಕಟೀಲ್ ವಿರುದ್ಧವೂ ಪ್ರಕರಣ ದಾಖಲು

Home add -Advt


ಪ್ರಗತಿವಾಹಿನಿ ಸುದ್ದಿ:
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಹಾಗೂ ಇಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆದರ್ಶ್ ಅಯ್ಯರ್ ನೀಡಿರುವ ದೂರಿನ ಮೇರೆಗೆ ಹಾಗೂ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆಯಂತೆ ಬೆಂಗಳೂರಿನ ತಿಲಕ ನಗರ ಪೊಲೀಸ್ ಠಾಣೆಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಇಡಿ, ನಳೀನ್ ಕುಮಾರ್ ಕಟೀಲ್, ಬಿ.ವೈ.ವಿಜಯೇಂದ್ರ, ರಾಜ್ಯ ಬಿಜೆಪಿ ಪದಾಧಿಕಾರಿಗಳು ಹಾಗೂ ಕೇಂದ್ರದ ಬಿಜೆಪಿ ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ನಿರ್ಮಲಾ ಸೀತಾರಾಮನ್ A1, ಇಡಿ A2, ಕೇಂದ್ರ ಬಿಜೆಪಿ ಪದಾಧಿಕಾರಿಗಳು A3, ನಳೀನ್ ಕುಮಾರ್ ಕಟೀಲ್ A4, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ A5 ಹಾಗೂ ರಾಜ್ಯ ಬಿಜೆಪಿ ಪದಾಧಿಕಾರಿಗಳು A6 ಆರೋಪಿಗಳು ಎಂದು ಉಲ್ಲೇಖಿಸಲಾಗಿದೆ.


Related Articles

Back to top button