Kannada NewsKarnataka NewsLatest

*ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಾವಲು ವಾಹನಗಳ ನಡುವೆ ಅಪಘಾತ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ಪಡೆ ವಾಹನಗಳ ನಡುವೆ ಡಿಕ್ಕಿಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವ ನಿಟ್ಟಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರಕ್ಕೆ ತೆರಳಿದ್ದರು. ಈ ವೇಳೆ ಅವರ ಬೆಂಗಾವಲು ಪಡೆ ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಶಿಡ್ಲಘಟ್ಟದ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಮುಂದೆ ಹೋಗುತ್ತಿದ್ದ ಬೆಂಗಾವಲು ಪಡೆ ಜೀಪ್ ಗೆ ಹಿಂದಿನಿಂದ ಬರುತ್ತಿದ್ದ ಜೀಪ್ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button