Belagavi NewsBelgaum NewsKarnataka NewsLatest
*ಬೆಳಗಾವಿ ಸೇರಿದಂತೆ ಈ ಜಿಲ್ಲೆಗಳಲ್ಲಿ ಶೀತಗಾಳಿ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಚಳಿಯ ಅಬ್ಬರ ಜೋರಾಗಿದೆ. ಕೆಲ ಜಿಲ್ಲೆಗಳಲ್ಲಿ ಶೀತಗಾಳಿ ಎಚ್ಚರಿಕೆ ಜೊತೆಗೆ ಮತ್ತೆ ಮಳೆ ಮುನ್ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದೆ.
ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 5 ಡಿಗ್ರಿಗೆ ಇಳಿಯುವ ಸಾಧ್ಯತೆ ಇದೆ. ಮುಂದಿನ ಮೂರು ದಿನಗಳ ಕಾಲ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ದಟ್ಟ ಮಂಜು, ಚಳಿ ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.




