Latest

ಬಿಸಿಯೂಟ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು; ಸಿಎಂ ಘೋಷಣೆ

ಪ್ರಗತಿವಾಹಿನಿ ಸುದ್ದಿ; ತುಮಕೂರು: ಮಧ್ಯಾಹ್ನದ ಬಿಸಿ ಊಟದ ಯೋಜನೆಗೆ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹೆಸರು ಇಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ 115ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಆವರಣದಲ್ಲಿ ಲಿಂಗೈಕ್ಯ ಡಾ ಶಿವಕುಮಾರ ಸ್ವಾಮಿಗಳ 115ನೇ ಜನ್ಮದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ನಡೆದಾಡೋ ದೇವರ ಬಸವ ಭಾರತ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಾ. ಶಿವಕುಮಾರ್ ಸ್ವಾಮಿಗಳಿಗೆ ನುಡಿ ನಮನ ಸಲ್ಲಿಸಿದರು. ಈ ವೇಳೆ ಬಿಸಿಯೂಟ ಯೋಜನೆಗೆ ಡಾ.ಶಿವಕುಮಾರ ಸ್ವಾಮೀಜಿ ಹೆಸರಿಡುತ್ತೇವೆ. ಈ ಬಗ್ಗೆ ರಾಜ್ಯ ಸರ್ಕಾರ ಶೀಘ್ರವೇ ಆದೇಶ ಹೊರಡಿಸಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಿದ್ದಗಂಗಾಮಠದ ಸಿದ್ದಲಿಂಗಸ್ವಾಮಿಗಳು, ಸುತ್ತೂರಿನ ಶಿವರಾತ್ರಿ ದೇಶೀಕೇಂದ್ರ ಶ್ರೀಗಳು, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿ, ನಾರಾಯಣಸ್ವಾಮಿ, ಭಗವಂತ ಖೂಬಾ, ಸಚಿವರಾದ ಅರಗ ಜ್ಞಾನೇಂದ್ರ, ಮಾಧುಸ್ವಾಮಿ, ಉಮೇಶ ಕತ್ತಿ, ಸಂಸದ ಬಸವರಾಜು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಮತ್ತು ಇತರರು ಉಪಸ್ಥಿತರಿದ್ದರು.

Home add -Advt

Related Articles

Back to top button