
3,44,38,796 ರೂ.ಮೌಲ್ಯದ ಚಿನ್ನ ಜಪ್ತಿ
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು, ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಬರೋಬ್ಬರಿ 399.22 ಗ್ರಾಂ ಬಂಗಾರವನ್ನು ಜಪ್ತಿ ಮಾಡಿದ್ದಾರೆ.
ದುಬೈನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನನ್ನು ತಪಾಸಣೆಗೊಳಪಡಿಸಿದಾಗ ಆತನ ಶರ್ಟ್ ನಲ್ಲಿ 399.22 ಗ್ರಾಂ ತೂಕದ 3,44,38,796 ರೂ.ಮೌಲ್ಯದ ಚಿನ್ನದ ಚೈನ್ ಪತ್ತೆಯಾಗಿದೆ.
ಗುಪ್ತಚರ ಮಾಹಿತಿ ಆಧಾರದ ಮೇಲೆ ಕಸ್ಟಮ್ಸ್ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದರು. ಇತ್ತೀಚೆಗಷ್ಟೇ ಸ್ಯಾಂಡಲ್ ವುಡ್ ಖ್ಯಾತ ನಟಿ ರನ್ಯಾ ರಾವ್ ದುಬೈ ನಿಂದ ಅಕ್ರಮವಾಗಿ ಚಿನ್ನದ ಬಿಸ್ಕೆಟ್ ಸಾಗಾಟ ಮಾಡುತ್ತಿದ್ದ ವೇಳೆ ಬೆಂಗಳೂರು ಏರ್ ಪೋರ್ಟ್ ನಲ್ಲಿ ಸಿಕ್ಕಿಬಿದ್ದಿದ್ದರು. ಅವರ ಬಳಿ ಇದ್ದ 17 ಚಿನ್ನದ ಗಟ್ಟಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಸದ್ಯ ರನ್ಯಾ ರಾವ್ ನ್ಯಾಯಾಂಗ ಬಂಧನದಲ್ಲಿದ್ದಾರೆ.