Latest

ಗ್ಯಾಂಗ್ ರೇಪ್ ಆರೋಪಿಗಳ ಮೇಲೆ ಪೊಲೀಸರ ಫೈರಿಂಗ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯುವತಿ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿ, ಆರೋಪಿಗಳನ್ನು ವಶಕ್ಕೆ ಪಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆರೋಪಿಗಳಾದ ರಿದಾರ್ ಬಾಬು ಹಾಗೂ ಸಾಗರ್ ನನ್ನು ಕೆ.ಚನ್ನಸಂದ್ರಕ್ಕೆ ಸ್ಥಳ ಮಹಜರಿಗೆ ಕರೆತಂದಿದ್ದಾಗ ಇಬ್ಬರು ಆರೋಪಿಗಳು ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳ ಇಬ್ಬರ ಕಾಲಿಗೆ ಗುಂಡೇಟು ಹೊಡೆದು ವಶಕ್ಕೆ ಪಡೆದಿದ್ದಾರೆ.

Home add -Advt

ಫೈರಿಂಗ್ ಬಗ್ಗೆ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಮಾಹಿತಿ ನೀಡಿದ್ದು, ಬಾಣಸವಾಡಿ ಎಸಿಪಿ ನೇತೃತ್ವದಲ್ಲಿ ಮಹಜರು ಮಾಡಲು ತೆರಳಿದ್ದಾಗ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಆತ್ಮರಕ್ಷಣೆಗಾಗಿ ಪೊಲೀಸರು ಆರೋಗಳ ಮೇಲೆ ಫೈರಿಂಗ್ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

Related Articles

Back to top button