Karnataka NewsPolitics

*ಪ್ರಜ್ವಲ್ ರೇವಣ್ಣ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

Home add -Advt

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ವಿರುದ್ಧ 2 ಸಾವಿರ ಪುಟಗಳ ಮೊದಲ ದೋಷಾರೋಪಟ್ಟಿ ಸಲ್ಲಿಕೆ ಮಾಡಿದ್ದಾರೆ. 123 ಜನರ ಸಾಕ್ಷ್ಯ ಸಗ್ರಹಿಸಿ, ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

ತನಿಖಾಧಿಕಾರಿ ಸುಮಾರಾಣಿ ಇಂದು ಜನಪ್ರತಿನಿಧಿಗಳ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸಿಪುರ ಟೌಣ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಆರೊಪ ಪ್ರಕರಣ ಸಂಬಂಧ ನಡೆಸಿದ್ದ ತನಿಖೆಗೆ ಸಂಬಂಧಿಸಿದಂತೆ ಈ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

Related Articles

Back to top button