Kannada NewsLatestNational

*ಭೀಕರ ಅಪಘಾತ: ನಾಲ್ವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಟ್ರಕ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಸೇರಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಬುಲಂದರ್ ಶಹರ್ ರಸ್ತೆಯ ಮಿನಿಲ್ಯಾಂಡ್ ಬಳಿ ನಡೆದಿದೆ.

ಮೃತದರನ್ನು ಡ್ಯಾನಿಷ್ (40) ಅವರ ಇಬ್ಬರು ಮಕ್ಕಳು, ಹಾಗೂ ಸಹೋದರನ ಮಕ್ಕಳು ಎಂದು ಗುರುತಿಸಲಾಗಿದೆ. ಸ್ನೇಹಿತನ ತೋಟದಿಂದ ಮನೆಗೆ ಹಿಂದಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರಾಂಗ್ ರೂಟ್ ನಲ್ಲಿ ವೇಗವಾಗಿ ಬಂದ ಟ್ರಕ್ ಬೈಕ್ ಗೆಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ.

ಅಪಘಾತದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button