Belagavi NewsBelgaum NewsKannada NewsKarnataka NewsLatest

ಪ್ರೀತಿ ನಿರಾಕರಿಸಿದ್ದಕ್ಕೆ ನರ್ಸ್ ಮೇಲೆ ಹಲ್ಲೆ: ಮನ ನೊಂದು ನರ್ಸ್ ತಂದೆ ಸಾವು

ಪ್ರಗತಿವಾಹಿನಿ ಸುದ್ದಿ : ಕುಂದಾನಗರಿ ಬೆಳಗಾವಿ ದಿನದಿಂದ ದಿನಕ್ಕೆ ಕ್ರೈಂ ಸಿಟಿಯಾಗಿ ಬದಲಾವಣೆ ಆಗ್ತಿದೆ. ಬೆಳಗಾವಿಯಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ ನರ್ಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಆಕೆ ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಕೋಪಗೊಂಡ ಆತ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.

ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ ನರ್ಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಆಕೆ ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಕೋಪಗೊಂಡ ಆತ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಈ ಘಟನೆಯಿಂದ ಮನನೊಂದ ನರ್ಸ್ ತಂದೆ ಮೃತಪಟ್ಟಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತು ಖಡೇಬಜಾ‌ರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

ಪ್ರೀತಿಸುವಂತೆ ನರ್ಸ್‌ ಹಿಂದೆ ಬಿದ್ದಿದ್ದ ಆರೋಪಿ ಪ್ರಕಾಶ್, ಆಕೆ ಪ್ರೀತಿಸಲು ನಿರಾಕರಿಸಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಕೈ ಚೀಲದಲ್ಲಿ ಮಚ್ಚು ಇಟ್ಟುಕೊಂಡು ಬಂದಿದ್ದ ಆತ, ಆಸ್ಪತ್ರೆಯ ಕೌಂಟರ್‌ಗೆ ನುಗ್ಗಿ ನರ್ಸ್ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಆತನ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕೆಲ ದಿನಗಳ ಹಿಂದೆ ತನ್ನ ಕುಟುಂಬದ ಜೊತೆ ನರ್ಸ್ ಮನೆಗೆ ಹೋಗಿದ್ದ. ನರ್ಸ್ ಕುಟುಂಬಸ್ಥರ ಬಳಿ ಮದುವೆ ಮಾಡಿಕೊಡುವಂತೆ ಪ್ರಸ್ತಾಪಿಸಿದ್ದ. ಆದರೆ ಮದುವೆ ಮಾಡಿಕೊಡಲು ನರ್ಸ್ ಕುಟುಂಬಸ್ಥರು ನಿರಾಕರಿಸಿದ್ದರು. ಇದಾದ ಬಳಿಕವೂ, ಮದುವೆ ಆಗುವಂತೆ ನರ್ಸ್ ಬೆನ್ನುಬಿದ್ದದ್ದ ಪ್ರಕಾಶ್, ಆಕೆ ಸ್ಪಂದಿಸದಿದ್ದಾಗ ಆಸ್ಪತ್ರೆಗೆ ನುಗ್ಗಿ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.

ಮಗಳ ಮೇಲಿನ ಹಲ್ಲೆ ವಿಚಾರದಿಂದ ನೊಂದಿದ್ದ ನರ್ಸ್ ತಂದೆ ಮೃತಪಟ್ಟಿದ್ದಾರೆ. ಮಗಳ ಸ್ಥಿತಿ ಹೀಗಾಯ್ತಲ್ಲ ಎಂದು ನೊಂದಿದ್ದ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Related Articles

Back to top button