
ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತಂಡದಿಂದ ಶೋಧ ಕಾರ್ಯಾಚರಣೆ ನಡೆಯುತ್ತಿದ್ದ ನಡುವೆಯೇ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ದೂರುದಾರ ತೋರಿಸಿರುವ ಸ್ಥಳದಲ್ಲಿ ಎಸ್ ಐಟಿ ತಂಡದಿಂದ ಇಂದು 8 ನೇ ದಿನದ ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ಮೂವರು ಯೂಟ್ಯೂಬರ್ ಗಳು ಸ್ಥಳದಲ್ಲಿ ವಿಡಿಯೋ ಮಾಡುತ್ತಿದ್ದ ವೇಳೆ ಸ್ಥಳೀಯರು ಆಕ್ರೋಶಗೊಂಡು ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿದ್ದಾರೆ. ನೇತ್ರಾವತಿ ಪಾಂಗಳದಲ್ಲಿ ಈ ಘಟನೆ ನಡೆದಿದೆ. ಈ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.