
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಜ್ಯದಲ್ಲಿ ತಾರಕಕ್ಕೇರಿದ್ದು, ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದೆ. ಇಂದು ಅಥವಾ ನಾಳೆ ಕೋರ್ಟ್ ತೀರ್ಪು ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕೋರ್ಟ್ ತೀರ್ಪು ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಹೈಕೋರ್ಟ್ ತೀರ್ಪು ಬರುವವರೆಗೆ ಶಾಂತಿ ಕಾಪಾಡಬೇಕು. ಮೂರು ದಿನಗಳ ಕಾಲ ಫೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಯಾವುದೇ ರೀತಿ ಸಮಸ್ಯೆಯಾಗದಂತೆ ಗೃಹ ಇಲಾಖೆ ಕೂಡ ಕ್ರಮ ಕೈಗೊಂಡಿದೆ. ಕೋರ್ಟ್ ತೀರ್ಪು ಬಂದ ಬಳಿಕ ಮುಂದಿನ ತೀರ್ಮಾನ ಮಾಡಲಾಗುವುದು ಎಂದರು.
ಸಧ್ಯದ ರಾಜ್ಯದ ಕಾಲೇಜು ಸ್ಥಿತಿಗತಿ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಹಿತಿ ನೀಡಿದ್ದೇನೆ. ಘಟನೆ ಹಿಂದೆ ಕಾಣದ ಶಕ್ತಿಗಳ ಕೈವಾಡವಿದೆ ಎಂಬ ಅನುಮಾನವಿದೆ. ವಿದ್ಯೆಗಿಂತ ಧರ್ಮವೇ ಮುಖ್ಯ ಎಂದು ಹೆಣ್ಣುಮಕ್ಕಳು ಹಠ ಮಾಡುತ್ತಿರುವುದನ್ನು ನೋಡಿದರೆ ಕೆಲ ದುಷ್ಟಶಕ್ತಿಗಳ ಹುನ್ನಾರವಿದೆ ಎನಿಸುತ್ತದೆ ಎಂದು ಹೇಳಿದರು.
ಕೆಪಿಟಿಸಿಎಲ್ 1492 ಹುದ್ದೆಗಳಿಗೆ ಅರ್ಜಿ ಆಹ್ವಾನ