Karnataka News

*ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಭಾರಿ ಮಳೆಯಾಗಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಮಳೆಯಾಗಲಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಮಂಡ್ಯ, ರಾಮನಗರ ಜಿಲ್ಲೆಗಳ್ಲಲಿ ಹಾಗೂ ರಾಯಚೂರು, ಯಾದಗಿರಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.

ಕರ್ನಾಟಕದಾದ್ಯಂತ ಏಪ್ರಿಲ್ 22ರ ಬಳಿಕ ಹೆಚ್ಚು ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button