Kannada News

*ಬಿಜೆಪಿಗೆ ರಾಜಿನಾಮೆ ನಿರ್ಧಾರ ಪ್ರಕಟಿಸಿದ ಲಕ್ಷ್ಮಣ ಸವದಿ; ಭೇಟಿ ಮಾಡಿದ ಕಾಂಗ್ರೆಸ್ ಮಾಜಿ ಶಾಸಕ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅಥಣಿಯ ಬಿಜೆಪಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ.

Home add -Advt

ಈ ಮಧ್ಯೆ ಕಾಂಗ್ರೆಸ್ ಮಾಜಿ ಶಾಸಕ ಸವದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿಯ ಟಿಕೆಟ್ ವಂಚಿತರಿಗೆ ಕಾಂಗ್ರೆಸ್ ತನ್ನತ್ತ ಸೆಳೆಯಲು ಯತ್ನಿಸಿದ್ದು, ಈ ನಿಟ್ಟಿನಲ್ಲಿ ಲಕ್ಷ್ಮಣ ಸವದಿಯವರನ್ನು ಅವರ ಸ್ನೇಹಿತ ಮಾಜಿ ಶಾಸಕ ರಾಜು ಕಾಗೆ ಮೂಲಕವೇ ಪಕ್ಷಕ್ಕೆ ಬರಮಾಡಿಕೊಲ್ಳಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ಡೆಲಕ್ಷ್ಮಣ ಸವದಿ ನಿವಾಸಕ್ಕೆ ಕಾಗವಾಡ ಕಾಂಗ್ರೆಸ್ ಮಾಜಿ ಶಾಸಕ ರಾಜು ಕಾಗೆ ಭೇಟಿ ನೀಡಿದ್ದು, ಕೆಲ ಕಾಲ ಚರ್ಚೆ ನಡೆಸಿದ್ದಾರೆ. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸವದಿ, ಟಿಕೆಟ್ ವಂಚಿಸಿದ ಪಕ್ಷದಲ್ಲಿ ಇರಲು ಸಾಧ್ಯವಿಲ್ಲ. ಹಾಗಾಗಿ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡುವೆ. ನಾಳೆ ಮತದಾರರ ಅಭಿಪ್ರಾಯ ಪಡೆದು ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದರು.

https://pragati.taskdun.com/benake-supporters-protested/

Related Articles

Back to top button